Home Uncategorizedಪಿಯುಸಿ ಎರಡೂ ಪರೀಕ್ಷೆಗಳಲ್ಲಿನ ಅತ್ಯುತ್ತಮ ಅಂಕವೇ ಸಿಇಟಿ ಫಲಿತಾಂಶಕ್ಕೆ – ಕೆಇಎ ಸ್ಪಷ್ಟನೆ

ಪಿಯುಸಿ ಎರಡೂ ಪರೀಕ್ಷೆಗಳಲ್ಲಿನ ಅತ್ಯುತ್ತಮ ಅಂಕವೇ ಸಿಇಟಿ ಫಲಿತಾಂಶಕ್ಕೆ – ಕೆಇಎ ಸ್ಪಷ್ಟನೆ

by anamika

🔰 ಪಿಯುಸಿ ಎರಡೂ ಪರೀಕ್ಷೆಗಳಲ್ಲಿನ ಅತ್ಯುತ್ತಮ ಅಂಕವೇ ಸಿಇಟಿ ಫಲಿತಾಂಶಕ್ಕೆ – ಕೆಇಎ ಸ್ಪಷ್ಟನೆ 🔰

ಬೆಂಗಳೂರು, ಏ.13: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸಿಇಟಿ ಫಲಿತಾಂಶದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಪರೀಕ್ಷೆ-1 ಹಾಗೂ ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಅತ್ಯಧಿಕ ಅಂಕವನ್ನೇ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಈ ಕುರಿತು ಪ್ರಕಟಣೆ ನೀಡಿ, ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಎರಡನೇ ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವರ್ಷದಂತೆಯೇ ಈ ಬಾರಿ ಕೂಡ ಎರಡೂ ಪರೀಕ್ಷೆಗಳಲ್ಲಿನ ಗರಿಷ್ಠ ಅಂಕವನ್ನೇ ಸಿಇಟಿ ರ‍್ಯಾಂಕ್‌ಗೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನೂ, ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎಂಬ ವದಂತಿಗಳನ್ನು ಖಂಡಿಸಿದ ಅವರು, ದ್ವಿತೀಯ ಪಿಯುಸಿ ಎರಡೂ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಈ ನಿಯಮವು ಕರ್ನಾಟಕ ರಾಜ್ಯ ಪಠ್ಯಕ್ರಮದ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

👉 ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೇ ಅಧಿಕೃತ ಮಾಹಿತಿಯನ್ನೇ ನಂಬುವಂತೆ ಕೆಇಎ ಮನವಿ ಮಾಡಿದೆ.

You may also like

Leave a Comment