60
ಬಿಹಾರ ರಾಜ್ಯಕ್ಕೆ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಯ್ಕೆ
ಬಿಹಾರ ರಾಜಕೀಯದಲ್ಲಿ ಮಂಗಳವಾರ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಸುಮಾರು ಎರಡು ದಶಕಗಳ ಕಾಲ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಅವರ ರಾಜೀನಾಮೆ ಬೆನ್ನಲ್ಲೇ, ಬಿಜೆಪಿ ಮುಖಂಡ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಬಿಹಾರ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿಶೇಷವೆಂದರೆ, ಬಿಹಾರದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಗದ್ದುಗೆ ಏರುತ್ತಿದ್ದಾರೆ.