50
ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ
ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನವನ್ನು ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಇಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಮೀಜೆ, ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಕಾರ್ಯದರ್ಶಿ ದೀಕ್ಷಿತ್ ಕಂಪ, ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ,ಜತೆ ಕಾರ್ಯದರ್ಶಿ ವಿನಯ್ ಎಳುವೆ, ಯುವಕ ಮಂಡಲದ ಗೌರವ ಸಲಹೆಗಾರರಾದ ಪರಮೇಶ್ವರ ಅನಿಲ, ಲಕ್ಷ್ಮಣ ಗೌಡ ಮುಗರಂಜ , ಯುವನ್ ರಾಜ್ ಉಪಸ್ಥಿತರಿದ್ದರು.