Home UncategorizedSSLC ತೃತೀಯ ಭಾಷೆಗಳಿಗೆ ಅಂಕವೇ ಕೊಡಬೇಕು: ಹೈಕೋರ್ಟ್ ನಿರ್ದೇಶನ

SSLC ತೃತೀಯ ಭಾಷೆಗಳಿಗೆ ಅಂಕವೇ ಕೊಡಬೇಕು: ಹೈಕೋರ್ಟ್ ನಿರ್ದೇಶನ

by anamika

 

SSLC ತೃತೀಯ ಭಾಷೆಗಳಿಗೆ ಅಂಕವೇ ಕೊಡಬೇಕು: ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಈ ಮಹತ್ವದ ಆದೇಶ ಹೊರಡಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

9

ಅರ್ಜಿದಾರರ ಪರ ವಕೀಲ ಆರ್.ವಿ. ನಾಯ್ಕ ವಾದ ಮಂಡಿಸಿ, ಆರಂಭದಲ್ಲಿ ಮಂಡಳಿ ತೃತೀಯ ಭಾಷಾ ವಿಷಯಗಳಿಗೆ 100 ಅಂಕಗಳ ಮೌಲ್ಯಮಾಪನ ಪದ್ಧತಿಯನ್ನು (80 ಅಂಕ ಲಿಖಿತ, 20 ಅಂಕ ಆಂತರಿಕ) ಅನುಸರಿಸುವುದಾಗಿ ಮಾರ್ಗಸೂಚಿ ನೀಡಿತ್ತು. ಆದರೆ ಪರೀಕ್ಷೆ ನಡೆಯುವ ಅಂತಿಮ ಹಂತದಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಕೈಗೊಂಡಿರುವುದನ್ನು ಪ್ರಶ್ನಿಸಿದರು.

ಇದಲ್ಲದೆ, ಯುಪಿಎಸ್‌ಸಿ ಹಾಗೂ ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳು ಕೇವಲ ಅಂಕಗಳನ್ನು ಪರಿಗಣಿಸುತ್ತವೆ. ಇಂತಹ ಸಂದರ್ಭದಲ್ಲಿ ಗ್ರೇಡಿಂಗ್ ಪದ್ಧತಿ ಅನುಸರಿಸಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ವಾದಿಸಿದರು.

 

ಈ ವಾದವನ್ನು ಪರಿಗಣಿಸಿದ ನ್ಯಾಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಬೇಕು ಎಂದು ಸರ್ಕಾರ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

 

 

You may also like

Leave a Comment