ದ್ವಿತೀಯ PU ಪರೀಕ್ಷೆ-2 ಪುನಾವರ್ತಿತ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪುನರಾವರ್ತಿತ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ತಾಂತ್ರಿಕ ದೋಷಗಳ ಕಾರಣದಿಂದಾಗಿ ಏಪ್ರಿಲ್ 17ರ ಬದಲಿಗೆ ಏಪ್ರಿಲ್ 18, 2026ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಗುರುವಾರ ಆದೇಶ ಹೊರಡಿಸಿದೆ.
ಈ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಗುರುವಾರ ಆದೇಶ ಹೊರಡಿಸಿದೆ.

ಅರ್ಜಿ ಸಲ್ಲಿಸಲು ಬಾಕಿ ಇರುವ ವಿದ್ಯಾರ್ಥಿಗಳು ಈ ಕೂಡಲೇ ವಿಸ್ತರಿಸಿದ ಕಾಲಾವಧಿಯ ಸದುಪಯೋಗ ಪಡೆದುಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಅಥವಾ ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ.
*ಸುತ್ತೋಲೆಯಲ್ಲಿ ಏನಿದೆ?*
2026ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನಾವರ್ತಿತ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 09 ರಿಂದ 17ರವರೆಗೆ ಆನ್‌ಲೈನ್ (http://tinyurl.com/mvp9k6es) ಮುಖಾಂತರ ಸಂಬಂಧಪಟ್ಟ ಕಾಲೇಜುಗಳಲ್ಲಿ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು
.ಈ ಸಂಬಂಧ ವಿದ್ಯಾರ್ಥಿ, ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಮನವಿಗಳು ಬಂದಿದ್ದವು. ಹೀಗಾಗಿ 2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನಾವರ್ತಿತ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಆನ್‌ಲೈನ್, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅಂತಿಮ ದಿನಾಂಕವನ್ನು ಏಪ್ರಿಲ್ 18ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.