38
ಸುಂಟಿಕೊಪ್ಪ ಮಾರುಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿ ಮೃತ್ಯು: ಗುರುತು ಪತ್ತೆಗೆ ಪೊಲೀಸರ ಮನವಿ
ಸುಂಟಿಕೊಪ್ಪ: ಸ್ಥಳೀಯ ಮಾರುಕಟ್ಟೆ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆ, ಮೃತ ವ್ಯಕ್ತಿಯನ್ನು ಗುರುತಿಸಲು ಕುಟುಂಬಸ್ಥರು ಅಥವಾ ಪರಿಚಯಸ್ಥರು ಮುಂದೆ ಬರಬೇಕೆಂದು ಸುಂಟಿಕೊಪ್ಪ ಪೊಲೀಸ್ ಠಾಣೆ ಮನವಿ ಮಾಡಿದೆ.
ಮೃತರ ಬಗ್ಗೆ ಯಾವುದೇ ಮಾಹಿತಿ ಇರುವವರು ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9480804953 ಅನ್ನು ಸಂಪರ್ಕಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.