Karnataka CET 2026: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ
ಬೆಂಗಳೂರು: (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಇಂದು ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಷಯಗಳಿಗೆ ನಡೆಯುತ್ತಿದೆ. ನಾಳೆ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಈ ವರ್ಷ ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇದರಲ್ಲಿ 1,44,380 ವಿದ್ಯಾರ್ಥಿಗಳು ಮತ್ತು 1,86,099 ವಿದ್ಯಾರ್ಥಿನಿಯರು ಸೇರಿದ್ದಾರೆ. ರಾಜ್ಯದಾದ್ಯಂತ 745 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪ್ರತಿಯೊಂದು ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

KEA ಸೂಚನೆಯಂತೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ಹಾಜರಾಗಬೇಕು.
ವಸ್ತ್ರಸಂಹಿತೆ ನಿಯಮಗಳು: ಅರ್ಧತೋಳು (half sleeve) ಉಡುಪು ಧರಿಸಬೇಕು ಕಾಲರ್ ಇಲ್ಲದ ಸರಳ ಬಟ್ಟೆಗಳು ಉತ್ತಮ ಗಂಡುಮಕ್ಕಳು ಜೇಬಿಲ್ಲದ ಅಥವಾ ಕಡಿಮೆ ಜೇಬು ಇರುವ ಪ್ಯಾಂಟ್ ಧರಿಸಬೇಕು ಕುರ್ಥಾ-ಪೈಜಾಮಾ, ಜೀನ್ಸ್, ಶೂಗಳು ನಿಷೇಧ ನಿಷೇಧಿತ ವಸ್ತುಗಳು: ಮೊಬೈಲ್ ಫೋನ್‌ಗಳು ಬ್ಲೂಟೂತ್ ಸಾಧನಗಳು ಇಯರ್‌ಫೋನ್, ಮೈಕ್ರೋಫೋನ್ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು
ಅಭ್ಯರ್ಥಿಗಳು ಪರೀಕ್ಷೆಗೆ ಮೊದಲು KEA ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಸಂಪೂರ್ಣ ಮಾರ್ಗಸೂಚಿಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಕನ್ನಡ ಭಾಷಾ ಪರೀಕ್ಷೆ ಹಾಜರು:
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗಾಗಿ ಬುಧವಾರ ನಡೆದ ಕನ್ನಡ ಭಾಷಾ ಪರೀಕ್ಷೆಗೆ 1,792ರಲ್ಲಿ 822 ಮಂದಿ (46%) ಹಾಜರಾಗಿದ್ದಾರೆ. ಬೆಂಗಳೂರು, ಮಂಗಳೂರು, ವಿಜಯಪುರ ಹಾಗೂ ಬೆಳಗಾವಿ ನಗರಗಳ ಐದು ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.