Home Uncategorizedಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ ಮರುಕಳಿಕೆ: ಸಿಬ್ಬಂದಿ ವಿರುದ್ಧ ಗಂಭೀರ ಆರೋಪ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ ಮರುಕಳಿಕೆ: ಸಿಬ್ಬಂದಿ ವಿರುದ್ಧ ಗಂಭೀರ ಆರೋಪ

by anamika

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ ಮರುಕಳಿಕೆ: ಸಿಬ್ಬಂದಿ ವಿರುದ್ಧ ಗಂಭೀರ ಆರೋಪ

ಬೆಂಗಳೂರು, ಏಪ್ರಿಲ್ 23: ರಾಜ್ಯದಾದ್ಯಂತ ಆರಂಭವಾದ ಸಿಇಟಿ ಪರೀಕ್ಷೆಗಳ ಮೊದಲ ದಿನವೇ ವಿವಾದಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ನಗರದ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ‘ಜನಿವಾರ’ ತೆಗೆಸಿರುವುದಾಗಿ ಆರೋಪ ಕೇಳಿಬಂದಿದೆ.

ಪರೀಕ್ಷೆಗೆ ಹಾಜರಾದ ಕೆಲ ವಿದ್ಯಾರ್ಥಿಗಳು, ಪರಿಶೀಲನೆ ವೇಳೆ ಸಿಬ್ಬಂದಿ ಜನಿವಾರ ತೆಗೆಸುವಂತೆ ಬಲವಂತ ಮಾಡಿದರು ಎಂದು ತಿಳಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ‘ತೆಗೆದಿಲ್ಲ ಎಂದರೆ ಪರೀಕ್ಷೆಗೆ ಅವಕಾಶ ಇಲ್ಲ’ ಎಂದು ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಬಳಿಕ ಪೋಷಕರು ಮಧ್ಯ ಪ್ರವೇಶಿಸಿದ ನಂತರ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆಕ್ರೋಶ ವ್ಯಕ್ತವಾಗಿದ್ದು, ಕಳೆದ ವರ್ಷದಂತೆಯೇ ಈ ಬಾರಿಯೂ ಸಿಇಟಿ ಪರೀಕ್ಷೆಯಲ್ಲಿ ‘ಜನಿವಾರ’ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ.

ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಇದೆ.

You may also like

Leave a Comment