34
ಕರ್ನಾಟಕ ಸರ್ಕಾರವು ‘ನಿರಂತರ’ ಎಂಬ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಇದರಡಿ 2026-27ನೇ ಶೈಕ್ಷಣಿಕ ಸಾಲಿನಿಂದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ AI ಆಧಾರಿತ ಮುಖ ಚಹರೆ ಗುರುತಿಸುವ (Facial Recognition) ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳ ಹಾಜರಾತಿ ಪಡೆಯಲಾಗುತ್ತದೆ.
ಈ ಮಾಹಿತಿಯು SATS ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ಲಭ್ಯವಿರಲಿದ್ದು, ಪಾರದರ್ಶಕತೆಯನ್ನು ಹೆಚ್ಚಿಸಲಿದೆ.
