112
ಕಾಣಿಯೂರು ಶ್ರೀ ಸತ್ಯನಾರಾಯಣ ಪೂಜೆ, ನರಸಿಂಹ ಜಯಂತಿ , ವಿಶೇಷ ಭಜನೆ
ಕಡಬ ತಾಲೂಕು ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಏಪ್ರಿಲ್ 30, 2026 ಗುರುವಾರ ಸಾರ್ವಜನಿಕವಾಗಿ ಐವತ್ತನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ನರಸಿಂಹ ಜಯಂತಿ ಹಾಗೂ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ಸಂಜೆ 6.00 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭವಾಗಲಿದ್ದು, ರಾತ್ರಿ 8.00 ಗಂಟೆಗೆ ಮಹಾಪೂಜೆ ನಡೆಯಲಿದೆ.
ಈ ಸಂದರ್ಭದಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಭಜನಾ ಮಂಡಳಿಯ ಸಮಿತಿ ಮನವಿ ಮಾಡಿದೆ.