Home Uncategorized🏆 ನವೀನ್ ಡಿಸೋಜ, ಹಿರಿಕರ ರವಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ

🏆 ನವೀನ್ ಡಿಸೋಜ, ಹಿರಿಕರ ರವಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ

by anamika

 ನವೀನ್ ಡಿಸೋಜ, ಹಿರಿಕರ ರವಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ

 

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವರದಿಗಾರರಾದ ನವೀನ್ ಡಿಸೋಜ ಹಾಗೂ ಹಿರಿಕರ ರವಿ ಆಯ್ಕೆಯಾಗಿದ್ದಾರೆ.

ಉದ್ಯಮಿ ಶಿವಶಂಕರ ನೆಕಾಜೆ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಂದೋಲನ ದಿನಪತ್ರಿಕೆಯ ಕೊಡಗು ಜಿಲ್ಲಾ ವರದಿಗಾರ ನವೀನ್ ಡಿಸೋಜ ಆಯ್ಕೆಯಾಗಿದ್ದರೆ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ನೀಡುವ ದತ್ತಿನಿಧಿ ಪ್ರಶಸ್ತಿಗೆ ಸೋಮವಾರಪೇಟೆ ವಿಜಯವಾಣಿ ವರದಿಗಾರ ಹಿರಿಕರ ರವಿ ಆಯ್ಕೆಯಾಗಿದ್ದಾರೆ.

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮೇ ೧೬ರಂದು ಕಾಸರಗೋಡುವಿನಲ್ಲಿ ನಡೆಯಲಿರುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಇಬ್ಬರು ಸೇರಿದಂತೆ ರಾಜ್ಯದ ವಿವಿಧೆಡೆಯ ಒಟ್ಟು ೧೮ ಮಂದಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಎ.ಕೆ.ಎಂ. ಅಶ್ರಫ್, ಕರ್ನಾಟಕ ಗಡಿ ಪದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್, ಕರ್ನಾಟಕ ಕಾರ್ಯಾನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಇತರರು ಪಾಲ್ಗೊಳ್ಳಲಿದ್ದಾರೆ.

You may also like

Leave a Comment