ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ, ಇದರ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬ, ತಾಲೂಕು ಪದಾಧಿಕಾರಿಗಳ ಸಭೆಯು ಮೇ 07 ರಂದು ಕಡಬ ಶ್ರೀ ಜಯ ದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿರವರು ಉದ್ಘಾಟಿಸಿ ಮಾತನಾಡಿ ಕಡಬ ಜನಜಾಗೃತಿ ವೇದಿಕೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಅಭಿನಂದಿಸಿ ಜನಜಾಗೃತಿಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸವನ್ನು ಮಾಡಿದಾಗ ನಮಗೆ ದೇವರ ಅನುಗ್ರಹ ಇರುತ್ತದೆ ಆದುದರಿಂದ ನಾವೆಲ್ಲ ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಬಾಬು ಎ ನಾಯ್ಕ ಮಾತನಾಡಿ ಜನಜಾಗೃತಿ ಕಾರ್ಯಕ್ರಮಗಳಾದ ಸ್ವಾಸ್ಥ್ಯ ಸಂಕಲ್ಪ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ವಿದ್ಯಾರ್ಥಿ ಮತ್ತು ಸಾರ್ವಜನಿಕರಲ್ಲಿ ಇನ್ನಷ್ಟು ಪರಿಣಾಮಕಾರಿಯಾಗುವಂತೆ ಜನಜಾಗೃತಿಯವರು ಪ್ರಯತ್ನಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ ಸವಣೂರುರವರು ಮಾತನಾಡಿ ತಾಲೂಕಿನ ಎಲ್ಲಾ ಜನಜಾಗೃತಿ ವೇದಿಕೆ ಸದಸ್ಯರ ಸಹಕಾರ, ಯೋಜನೆ ಮತ್ತು ಜನ ಜಾಗೃತಿ ವೇದಿಕೆಯ ಅಧಿಕಾರಿಗಳ ನಿರಂತರ ಪ್ರೋತ್ಸಹ ಸಲಹೆ ಸೂಚನೆಯಿಂದ ಜನ ಜಾಗೃತಿ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಯಿತು ಎಂದರು. 2026-27ನೇ ಸಾಲಿನ ಕ್ರಿಯಾ ಯೋಜನೆಯ ಬಗ್ಗೆ ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿಯವರಾದ ಗಣೇಶ್ ಆಚಾರ್ಯ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುವ ಕಡಬ ತಾಲೂಕಿನ 20 ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸುವ, ಮದ್ಯವರ್ಜನ ಶಿಬಿರ, ಕ್ರೀಡಾಕೂಟ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 2027-28 ನೇ ಸಾಲಿನ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಇಂದುಶೇಖರ ಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಶೇ 96 ಅಂಕ ಪಡಕೊಂಡಿರುವ ಶಿವಪ್ರಸಾದ್ ರೈ ಮೈಲೇರಿಯವರ ಸುಪುತ್ರಿ ಪೂರ್ವಿ ರೈಯವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ ಸವಣೂರು, ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿರವರನ್ನು ತಾಲೂಕು ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರುರವರು ತಾಲೂಕು ಉಪಾಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ, ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಎ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕಡಬ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ಪ್ರಕಾಶ್ ಕುಮಾರ್ ರವನ್ನು ಅಭಿನಂದಿಸಿದರು.
ಸಭೆಯಲ್ಲಿ ತಾಲೂಕು ಉಪಾಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ , ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಜಯಾನಂದ ಬಂಟ್ರಿಯಾಲ್, ಗಣೇಶ್ ಕೈಕುರೆ, ಶಿವಪ್ರಸಾದ್ ರೈ ಮೈಲೇರಿ, ಕಡಬ ವಲಯಾಧ್ಯಕ್ಷ ಕರುಣಾಕರ ಗೋಗಟೆ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ವರ್ಗೀಸ್, ಗಿರೀಶಂಕರ ಸುಲಾಯ, ಶ್ರೀಮತಿ ಪಿ ವೈ ಕುಸುಮ, ಶ್ರೀಮತಿ ಸರೋಜಿನಿ ಆಚಾರ್ಯ, ಮಹಮದ್ ಆಲಿ, ಶ್ರೀಮತಿ ಶಾರದಾ, ಶ್ರೀಮತಿ ಮಮತಾ ರೈ, ಶ್ರೀಮತಿ ಮೀನಾಕ್ಷಿ ಮೊದಲಾದವರು ಉಪಸ್ಥಿತರಿದ್ದರು
ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್‌ರವರು ವಾರ್ಷಿಕ ವರದಿಯನ್ನು ವಾಚಿಸಿದರು. ಕಡಬ ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್ ಸ್ವಾಗತಿಸಿ, ಬಿಳಿನೆಲೆ ವಲಯ ಮೇಲ್ವಿಚಾರಕರಾದ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.