Home Uncategorizedತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ! ಸೂಪರ್‌ಸ್ಟಾರ್ ವಿಜಯ್ ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿ

ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ! ಸೂಪರ್‌ಸ್ಟಾರ್ ವಿಜಯ್ ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿ

by anamika

🎬🗳️ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ!
ಸೂಪರ್‌ಸ್ಟಾರ್ ವಿಜಯ್ ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿ

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ ವಿಜಯ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ಪ್ರಭಾವವಿದ್ದ ತಮಿಳುನಾಡು ರಾಜಕೀಯದಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ.

ಕಾಂಗ್ರೆಸ್, ಸಿಪಿಐ ಹಾಗೂ ಸಿಪಿಐ(ಎಂ) ಸೇರಿದಂತೆ ಹಲವು ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬೆಂಬಲ ಪಡೆದಿರುವ ವಿಜಯ್, 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರಕ್ಕೇರಿದ ಮೊದಲ ನಾಯಕ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಚಿತ್ರರಂಗದ ಜನಪ್ರಿಯ ನಟನಾಗಿದ್ದ ವಿಜಯ್ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಅಭಿಮಾನಿಗಳಲ್ಲಿ ಭಾರೀ ಸಂಭ್ರಮಕ್ಕೆ ಕಾರಣವಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಜನಪರ ಭರವಸೆಗಳು, ಯುವಕರನ್ನು ಸೆಳೆಯುವ ನಾಯಕತ್ವ ಹಾಗೂ ಬದಲಾವಣೆಯ ಘೋಷಣೆಗಳ ಮೂಲಕ ಜನರ ವಿಶ್ವಾಸ ಗೆದ್ದಿರುವ ವಿಜಯ್ ಅವರ ಆಡಳಿತ ಇದೀಗ ತಮಿಳುನಾಡಿನ ರಾಜಕೀಯಕ್ಕೆ ಹೊಸ ದಿಕ್ಕು ತೋರಿಸಬಹುದೇ ಎಂಬ ಕುತೂಹಲ ಹೆಚ್ಚಿದೆ.

You may also like

Leave a Comment