Home Uncategorizedಕೋಲ್ ಇಂಡಿಯಾ ಲಿಮಿಟೆಡ್​​ನಲ್ಲಿ 276 ಹುದ್ದೆಗಳಿಗೆ ನೇಮಕಾತಿ*

ಕೋಲ್ ಇಂಡಿಯಾ ಲಿಮಿಟೆಡ್​​ನಲ್ಲಿ 276 ಹುದ್ದೆಗಳಿಗೆ ನೇಮಕಾತಿ*

by anamika

*ಕೋಲ್ ಇಂಡಿಯಾ ಲಿಮಿಟೆಡ್​​ನಲ್ಲಿ 276 ಹುದ್ದೆಗಳಿಗೆ ನೇಮಕಾತಿ*

 

ಕೋಲ್ ಇಂಡಿಯಾ ಲಿಮಿಟೆಡ್ (CIL) 276 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವೀಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ವಿಶೇಷವೆಂದರೆ ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲ. GATE 2025 ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು.

ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆಯಾದ ಕೋಲ್ ಇಂಡಿಯಾ ಲಿಮಿಟೆಡ್ (CIL), ಗಣಿ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (Management Trainee) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಪ್ರತ್ಯೇಕ ಲಿಖಿತ ಪರೀಕ್ಷೆ ಇರುವುದಿಲ್ಲ.

 

*ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:*

ಮ್ಯಾನೇಜ್ಮೆಂಟ್ ಟ್ರೈನಿ (ಗಣಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಬಿಇ ಅಥವಾ ಬಿಟೆಕ್ (BE/B.Tech) ಪದವಿ ಪೂರ್ಣಗೊಳಿಸಿರಬೇಕು.

ಅಂಕಗಳ ವಿಷಯಕ್ಕೆ ಬಂದರೆ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ. 60 ಅಂಕಗಳನ್ನು ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ. 55 ಅಂಕಗಳನ್ನು ಪಡೆದಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ, ಏಪ್ರಿಲ್ 30, 2026 ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಸರ್ಕಾರದ ನಿಯಮದಂತೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

You may also like

Leave a Comment