Home Uncategorizedಕನ್ನಡ ಚಿತ್ರರಂಗಕ್ಕೆ ಆಘಾತ: ನಟ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗಕ್ಕೆ ಆಘಾತ: ನಟ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

by anamika

BREAKING NEWS | ಕನ್ನಡ ಚಿತ್ರರಂಗಕ್ಕೆ ಆಘಾತ: ನಟ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಮನೆಯಲ್ಲಿ ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಇತ್ತೀಚೆಗಷ್ಟೇ ‘ಲವ್ ಮಾಕ್ಟೇಲ್-3’ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ದಿಲೀಪ್‌ ರಾಜ್‌, ಆರೋಗ್ಯವಂತ ವ್ಯಕ್ತಿಯಾಗಿದ್ದು ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇರಲಿಲ್ಲ ಎಂಬ ಮಾಹಿತಿ ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದಿಲೀಪ್‌ ರಾಜ್‌ ಅವರ ಅಕಾಲಿಕ ನಿಧನ ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತ ತಂದಿದೆ. ಬೆಳಗ್ಗಿನ ಜಾವವೇ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಸ್ನೇಹಿತರು ಸಂತಾಪ ಸೂಚಿಸುತ್ತಿದ್ದಾರೆ.

ಕನ್ನಡ ಸಿನಿಪ್ರಿಯರ ಮನದಲ್ಲಿ ಸದಾ ಜೀವಂತವಾಗಿರುವ ದಿಲೀಪ್‌ ರಾಜ್‌ ಇದೀಗ ನೆನಪು ಮಾತ್ರವಾಗಿದ್ದಾರೆ.

You may also like

Leave a Comment