146
📰 ಮೂಲ್ಕಿಯಲ್ಲಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ – ವಿದ್ಯಾರ್ಥಿನಿ ಬಂಧನ
ಮಂಗಳೂರು/ಕುಂದಾಪುರ: ಲಕ್ಷಾಂತರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂಲ್ಕಿ ಪೊಲೀಸರು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತಳನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ (21) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಆಕೆಯಿಂದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹35 ಲಕ್ಷ ಎಂದು ಅಂದಾಜಿಸಲಾಗಿದೆ.
ಆಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿ ವ್ಯಾಸಂಗ ಮಾಡುತ್ತಿದ್ದಳು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಮೂಲ ಮತ್ತು ಜಾಲದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.