ಕುಕ್ಕೆ ಶ್ರೀ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ; ದೇವರ ದರ್ಶನ ಅವಧಿ ವಿಸ್ತರಣೆ
🪷🌸ಸುಬ್ರಹ್ಮಣ್ಯದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ಕಲ್ಪಿಸಲಾಗಿದೆ.
ಈ ಮೊದಲು ಪ್ರತಿದಿನ ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನ ಸಂಪೂರ್ಣ ಬಂದ್ ಮಾಡಲಾಗುತ್ತಿತ್ತು. ಆದರೆ ಭಕ್ತರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಇದೀಗ ಮಧ್ಯಾಹ್ನ 2ರಿಂದ 3ರವರೆಗೆ ಮಾತ್ರ ದರ್ಶನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಮೂಲಕ ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ದರ್ಶನ ಸೌಲಭ್ಯ ದೊರೆಯಲಿದೆ.

🌸ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಗಾಗಿ ಪ್ರತಿದಿನ ಭಕ್ತರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
🍃ಈ ಕುರಿತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾತನಾಡಿ, ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಹೆಚ್ಚುವರಿ ಒಂದು ಗಂಟೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ವೇಳಾಪಟ್ಟಿಯ ಪ್ರಕಾರ, ಪ್ರತಿದಿನ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.00ರವರೆಗೆ ಹಾಗೂ ಮಧ್ಯಾಹ್ನ 3.00ರಿಂದ ರಾತ್ರಿ 8.30ರವರೆಗೆ ಭಕ್ತರು ದೇವರ ದರ್ಶನ ಪಡೆಯಬಹುದು. ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಾವಧಿಗೆ ದರ್ಶನ ಸ್ಥಗಿತಗೊಳಿಸಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಮಾಹಿತಿ ನೀಡಿದೆ.