ಸುಳ್ಯ ತಾಲೂಕಿನ ಸುಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ (ಮೇ.16) ರ ದಿನ ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದ್ದು, ನ್ಯಾಯದೇವತೆ ಮತ್ತು ಕರ್ಮಫಲದಾತನಾದ ಶನಿ ದೇವನ ಜನ್ಮದಿನವಾಗಿ ಆಚರಿಸಲಾಗುತ್ತದೆ.
ಈ ದಿನದಂದು ವಿಶೇಷ ಪೂಜೆ, ವ್ರತ ಹಾಗೂ ದಾನಗಳನ್ನು ಮಾಡುವುದರಿಂದ ಶನಿಯ ಪ್ರಭಾವ ಮತ್ತು ದೋಷಗಳಿಂದ ಮುಕ್ತಿ ಪಡೆಯಬಹುದು ಎಂಬ ಬಲವಾದ ನಂಬಿಕೆಯಿದೆ. ಈ ಕಾರಣ ಶ್ರೀ ದೇವರ ದರ್ಶನಕ್ಕೆ ಆಗಮಿಸಿದ್ದು, ಶನಿಪೂಜೆ, ರುದ್ರಾಭಿಷೇಕ, ಹಾಲು-ಪಾಯಸ, ಅವಲಕ್ಕಿ-ಪಂಚಕಜ್ಜಾಯ ಮುಂತಾದ ಸೇವೆಗಳೊಂದಿಗೆ ಸುಮಾರು 500ಕ್ಕೂ ಅಧಿಕ ಭಕ್ತಾದಿಗಳು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಗಂಧ ಪ್ರಸಾದ ಪಡೆದು ಶ್ರೀ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
