Home HISTORYನಾಳೆ ಮಂಗಳೂರಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ನಾಳೆ ಮಂಗಳೂರಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

by anamika

 

ನಾಳೆ ಮಂಗಳೂರಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅಹವಾಲುಗಳನ್ನು ಸ್ವೀಕರಿಸಲು ನಾಳೆ (ಮೇ 19) ಲಭ್ಯವಿರಲಿದ್ದಾರೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಂಸದರ ಗಮನಕ್ಕೆ ತರಲು ಈ ಭೇಟಿಯ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಕಾರ್ಯಕ್ರಮದ ವಿವರಗಳು:

ದಿನಾಂಕ: 19-05-2026, ಮಂಗಳವಾರ

ಸಮಯ: ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ

ಸ್ಥಳ: ಸಂಸದರ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ (DC , ಪಡೀಲ್, ಮಂಗಳೂರು.

ಕ್ಷೇತ್ರದ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನಿಗದಿಪಡಿಸಿದ ಸಮಯದಲ್ಲಿ ಭೇಟಿ ನೀಡಿ, ತಮ್ಮ ಮನವಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You may also like

Leave a Comment