ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಕಡಬ ಜನಜಾಗೃತಿ ವೇದಿಕೆಗೆ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ 1 ಮತ್ತು 2ರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಮೇ 20 ರಂದು ಬಂಟ್ವಾಳ ಯೋಜನಾ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಮಹೇಶ್ ಕೆ ಸವಣೂರು ಮತ್ತು ದ್ವಿತೀಯ ಸ್ಥಾನ ಪಡೆದ ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ರವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ದ.ಕ-2 ರ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಎ, ದ.ಕ-1ರ ಜಿಲ್ಲಾ ನಿರ್ದೇಶಕರಾದ ದಿನೇಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಸುಳ್ಯ ಯೋಜನಾಧಿಕಾರಿ ಮಾಧವ, ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಇಂದುಶೇಖರ್ ಶೆಟ್ಟಿ, ಜಿಲ್ಲಾ ವೇದಿಕೆಯ ಸದಸ್ಯರಾದ ಸೀತಾರಾಮ ಗೌಡ ಪೊಸವೊಳಿಕೆ, ಶಿವಪಪ್ರಸಾದ್ ರೈ ಮೈಲೇರಿ, ಜಯಾನಂದ ಬಂಟ್ರಿಯಾಲ್, ಗಣೇಶ್ ಕೈಕುರೆ, ಮಹೇಶ್ ನೇರೇಂಕಿ ಮೊದಲಾದರು ಉಪಸ್ಥಿತರಿದ್ದರು.