Home HISTORYಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಪಿಐಎಲ್; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಪಿಐಎಲ್; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

by anamika

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಪಿಐಎಲ್; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಇಬ್ಬರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಾ. ಕೆ. ಮನ್ಮಥ ರಾವ್ ಹಾಗೂ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು, ರಾಜ್ಯ ಹಣಕಾಸು ಇಲಾಖೆ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಗೆ ಉತ್ತರಿಸುವಂತೆ ಸೂಚಿಸಿದೆ.

ತಾಲೂಕು ಪಂಚಾಯಿತಿಗಳ ಮೂಲಕ ಹಣ ನಿರ್ವಹಿಸುವ ಹೊಸ ನೀತಿಯ ತಾಂತ್ರಿಕ ಗೊಂದಲದಿಂದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹೈಕೋರ್ಟ್ ಮಧ್ಯಪ್ರವೇಶದ ಬಳಿಕ ಲಕ್ಷಾಂತರ ಮಹಿಳಾ ಫಲಾನುಭವಿಗಳಿಗೆ ಬಾಕಿ ಹಣ ಬಿಡುಗಡೆಯಾಗುವ ನಿರೀಕ್ಷೆ ಹೆಚ್ಚಾಗಿದೆ.

You may also like

Leave a Comment