Home Uncategorizedಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ

ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ

by anamika

ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ

ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್‌ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೂ ಇದೇ ದಿನ ಮತದಾನ ನಡೆಯಲಿದೆ.

ಚುನಾವಣೆಯ ಫಲಿತಾಂಶವೂ ಜೂನ್‌ 18ರಂದೇ ಪ್ರಕಟವಾಗಲಿದೆ. ಚುನಾವಣಾ ಪ್ರಕ್ರಿಯೆಯಂತೆ ಜೂನ್‌ 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್‌ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್‌ 11 ಕೊನೆಯ ದಿನಾಂಕವಾಗಿದೆ.

ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಕುರಿತ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು, ರಾಜ್ಯಸಭಾ ಚುನಾವಣೆಯ ರಾಜಕೀಯ ಚಟುವಟಿಕೆಗಳಿಗೆ ಇದೀಗ ವೇಗ ಸಿಕ್ಕಿದೆ.

You may also like

Leave a Comment