82
ಅಮೆರಿಕ-ಇರಾನ್ ಸಂಘರ್ಷ ಪರಿಣಾಮ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಮೇ 23: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಹಣದುಬ್ಬರದ ಭೀತಿ ಹೆಚ್ಚಾಗಿದೆ. ಇದರ ಪರಿಣಾಮ ಅಮೂಲ್ಯ ಲೋಹಗಳ ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಇಳಿಕೆ ದಾಖಲಾಗಿದೆ.

ಮೇ 23, 2026 ಶನಿವಾರದ ಚಿನ್ನದ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ 430 ರೂ ಇಳಿಕೆಯಾಗಿದ್ದು, 1,59,060 ರೂಗೆ ತಲುಪಿದೆ. ಇದೇ ವೇಳೆ 1 ಗ್ರಾಂ ಚಿನ್ನದ ದರವು 43 ರೂ ಇಳಿಕೆಯಾಗಿದ್ದು, 15,906 ರೂ ಆಗಿದೆ.
22 ಕ್ಯಾರೆಟ್ ಚಿನ್ನದ ದರದಲ್ಲಿಯೂ ಇಳಿಕೆ ಕಂಡುಬಂದಿದೆ. 1 ಗ್ರಾಂಗೆ 40 ರೂ ಇಳಿಕೆಯಾಗಿದ್ದು, ದರ 14,580 ರೂ ಆಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ ಇಳಿಕೆಯಾಗಿ, 1,45,800 ರೂ ದಾಖಲಾಗಿದೆ.

ಇನ್ನೊಂದೆಡೆ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರತಿ ಗ್ರಾಂ ಬೆಳ್ಳಿ ದರ 285 ರೂ ಆಗಿದ್ದು, ಕೆಜಿ ಬೆಳ್ಳಿ ಬೆಲೆ 2.85 ಲಕ್ಷ ರೂಗಳಲ್ಲೇ ಸ್ಥಿರವಾಗಿದೆ.