Home Uncategorizedಪೆಟ್ರೋಲ್‌, ಡೀಸೆಲ್‌ ಬೆಲೆ 10 ರೂಪಾಯಿ ಏರಿಕೆ? ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

ಪೆಟ್ರೋಲ್‌, ಡೀಸೆಲ್‌ ಬೆಲೆ 10 ರೂಪಾಯಿ ಏರಿಕೆ? ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

by anamika

ಪೆಟ್ರೋಲ್‌, ಡೀಸೆಲ್‌ ಬೆಲೆ 10 ರೂಪಾಯಿ ಏರಿಕೆ? ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತೆ ಹೆಚ್ಚಳ ಮಾಡಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಳೆದ 10 ದಿನಗಳಲ್ಲಿ ಮೂರನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ಮೇ 15, 19 ಮತ್ತು 23ರಂದು ಒಟ್ಟು 5 ರೂಪಾಯಿ ಹೆಚ್ಚಳವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇದೀಗ ಮತ್ತೆ 10 ರೂಪಾಯಿ ವರೆಗೆ ದರ ಏರಿಕೆ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕರು, ಇದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಭಾರ ಹೊರಿಸುವ ಕ್ರಮ ಎಂದು ಟೀಕಿಸಿದ್ದಾರೆ.

ಬಿಜೆಪಿ ಮುಖಂಡರು ಮಾತನಾಡಿ, ಕಳೆದ ವರ್ಷವೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿತ್ತು. ಅದರ ಪರಿಣಾಮವಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 99 ರೂಪಾಯಿ ಹಾಗೂ ಡೀಸೆಲ್ ದರ 94 ರೂಪಾಯಿ ಗಡಿ ದಾಟಿತ್ತು. ಇದೀಗ ಮತ್ತೆ ತೆರಿಗೆ ಹೆಚ್ಚಳದ ನಿರ್ಧಾರ ಕೈಗೊಂಡರೆ ಮಧ್ಯಮ ವರ್ಗ, ರೈತರು ಹಾಗೂ ವಾಹನ ಸವಾರರ ಮೇಲೆ ದುಷ್ಪರಿಣಾಮ ಬೀಳಲಿದೆ ಎಂದು ಎಚ್ಚರಿಸಿದರು.

ಇಂಧನ ದರ ಏರಿಕೆಯಿಂದ ಸಾರಿಗೆ, ದಿನಸಿ ಹಾಗೂ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಸರ್ಕಾರ ತಕ್ಷಣ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

You may also like

Leave a Comment