Home Uncategorizedಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಿಎಲ್ಪಿ ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಿಎಲ್ಪಿ ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

by anamika

ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: ಸಿಎಲ್ಪಿ ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 30: ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಪಡೆಯುವ ನಿರೀಕ್ಷೆಯಿದೆ. ಈ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪ್ರಮುಖ ಆಕಾಂಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಅವರು ರಾಜ್ಯಪಾಲ ಅವರನ್ನು ಭೇಟಿ ಮಾಡಿ ಪ್ರಮಾಣವಚನ ಸ್ವೀಕಾರ ಸಮಾರಂಭದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ರಾಜ್ಯಪಾಲರ ಲಭ್ಯತೆ ಕುರಿತು ಚರ್ಚಿಸಿದರು. ಜೂನ್ 1, 3 ಮತ್ತು 5ರಂದು ಪ್ರಮಾಣವಚನ ಸಮಾರಂಭ ನಡೆಸುವ ಸಾಧ್ಯತೆಗಳ ಕುರಿತು ಮಾತುಕತೆ ನಡೆದಿರುವ ಮಾಹಿತಿ ಲಭ್ಯವಾಗಿದೆ.

ಇನ್ನೊಂದೆಡೆ, ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮುನ್ನ ಅವರು ತಮ್ಮ ‘ಕಾವೇರಿ’ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಜನರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಕಾಂಗ್ರೆಸ್‌ನ ಹಲವು ಶಾಸಕರು ಹಾಗೂ ಹಿರಿಯ ನಾಯಕರು ಅವರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಸಿದ್ಧತೆಗಳು ವೇಗ ಪಡೆದಿರುವ ಬೆನ್ನಲ್ಲೇ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳೂ ಗರಿಗೆದರಿವೆ. ಸಚಿವ ಸ್ಥಾನ ಆಕಾಂಕ್ಷಿಗಳು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ತೀವ್ರ ಲಾಬಿ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ಕುರಿತ ಅಂತಿಮ ನಿರ್ಧಾರ ಇಂದು ನಡೆಯಲಿರುವ ಸಿಎಲ್ಪಿ ಸಭೆಯಲ್ಲಿ ಪ್ರಕಟವಾಗುವ ಸಾಧ್ಯತೆ ಇದ್ದು, ರಾಜ್ಯದ ರಾಜಕೀಯ ವಲಯದ ಗಮನ ಇದೀಗ ಕಾಂಗ್ರೆಸ್ ನಾಯಕತ್ವದ ಮುಂದಿನ ಹೆಜ್ಜೆಯತ್ತ ನೆಟ್ಟಿದೆ.

You may also like

Leave a Comment