28
ಶಿಕ್ಷಣ ಸಚಿವರ ರಾಜೀನಾಮೆಗೆ ಜೂನ್ 6ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಕ್ಷದ ಕರೆ
ನವದೆಹಲಿ: ವಿವಿಧ ಪರೀಕ್ಷಾ ಅಕ್ರಮಗಳ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಜೂನ್ 6ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಕ್ಷ ಕರೆ ನೀಡಿದೆ.
ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಜೂನ್ 6ರಂದು ಭಾರತಕ್ಕೆ ಆಗಮಿಸಲಿದ್ದು, ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಸೇರಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಬಳಿಕ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೋರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್ ವಿಡಿಯೋ ಸಂದೇಶದ ಮೂಲಕ ಪ್ರತಿಭಟನೆಯ ಕುರಿತು ಮಾಹಿತಿ ಹಂಚಿಕೊಂಡಿರುವ ದೀಪ್ಕೆ, ಪರೀಕ್ಷಾ ಅಕ್ರಮಗಳ ವಿರುದ್ಧ ಧ್ವನಿಯಾಗಲು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.
