Home HISTORYಇಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರದಲ್ಲಿ ಬದಲಾವಣೆ

ಇಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರದಲ್ಲಿ ಬದಲಾವಣೆ

by anamika

ಇಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರದಲ್ಲಿ ಬದಲಾವಣೆ

ಬೆಂಗಳೂರು, ಜೂ. 3: ನಿಯೋಜಿತ ಮುಖ್ಯಮಂತ್ರಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ಲೋಕಭವನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಪೊಲೀಸರು ವಿಶೇಷ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.

ಭದ್ರತೆ ಮತ್ತು ಸಂಚಾರ ದಟ್ಟಣೆ ನಿಯಂತ್ರಣದ ಉದ್ದೇಶದಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲೋಕಭವನ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಜಾರಿಗೊಳಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

 

You may also like

Leave a Comment